May 19, 2026
Tuesday, May 19, 2026
spot_img

CINE | ‘ಪೆದ್ದಿ’ ಟ್ರೈಲರ್‌ಗೆ ರಿಷಬ್ ಫಿದಾ: ರಾಮ್ ಚರಣ್, ಶಿವಣ್ಣನ ಎನರ್ಜಿ ನೋಡಿ ಶೆಟ್ರು ಫುಲ್ ಖುಷ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಷಬ್ ಶೆಟ್ಟಿ ಮೆಚ್ಚುಗೆಯ ಮಾತುಗಳೊಂದಿಗೆ ರಾಮ್ ಚರಣ್ ಅಭಿನಯದ ‘ಪೆದ್ದಿ’ ಚಿತ್ರದ ಟ್ರೈಲರ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಟ್ರೈಲರ್‌ಗೆ ಸಿನಿ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಇದೀಗ ರಿಷಬ್ ಶೆಟ್ಟಿ ಕೂಡ ಚಿತ್ರತಂಡವನ್ನು ಹೊಗಳಿದ್ದಾರೆ.

ರಾಮ್ ಚರಣ್ ನಟನೆಯ ಬಗ್ಗೆ ವಿಶೇಷ ಮೆಚ್ಚುಗೆ

ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, “ರಾಮ್ ಚರಣ್ ಪ್ರತಿಯೊಂದು ಫ್ರೇಮ್‌ನಲ್ಲೂ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಅವರ ಸ್ಕ್ರೀನ್ ಪ್ರೆಸೆನ್ಸ್ ಮತ್ತು ಎನರ್ಜಿ ಟ್ರೈಲರ್‌ಗೆ ಮತ್ತಷ್ಟು ತೂಕ ನೀಡಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಶಿವಣ್ಣ ಪಾತ್ರಕ್ಕೆ ರಿಷಬ್ ಶ್ಲಾಘನೆ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಿವರಾಜಕುಮಾರ್ ಅವರ ಅಭಿನಯಕ್ಕೂ ರಿಷಬ್ ಮೆಚ್ಚುಗೆ ಸೂಚಿಸಿದ್ದಾರೆ. “ಶಿವಣ್ಣನ ಸ್ಕ್ರೀನ್ ಪ್ರೆಸೆನ್ಸ್ ಸಿನಿಮಾಕ್ಕೆ ವಿಭಿನ್ನ ಮೆರುಗು ತಂದಿದೆ” ಎಂದು ಹೇಳಿದ್ದಾರೆ. ಜೊತೆಗೆ ನಾಯಕಿ ಜಾಹ್ನವಿ ಕಪೂರ್ ಅಭಿನಯವೂ ಗಮನ ಸೆಳೆಯುತ್ತದೆ ಎಂದು ತಿಳಿಸಿದ್ದಾರೆ.

ಜೂನ್ 4ಕ್ಕೆ ‘ಪೆದ್ದಿ’ ಗ್ರ್ಯಾಂಡ್ ರಿಲೀಸ್

ನಿರ್ದೇಶಕ ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ರಾಮ್ ಚರಣ್ ಕ್ರಿಕೆಟರ್ ಹಾಗೂ ಕುಸ್ತಿಪಟುವಿನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಶಿವರಾಜ್‌ಕುಮಾರ್ ಗುರು ಪಾತ್ರದಲ್ಲಿ ನಟಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !