ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಮೊದಲೇ ದೊಡ್ಡ ದಾಖಲೆ ನಿರ್ಮಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವಿತರಣಾ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ತೆಲುಗು ನಿರ್ಮಾಪಕ ದಿಲ್ ರಾಜು ಅವರ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ, ಈ ಎರಡು ರಾಜ್ಯಗಳ ಹಕ್ಕುಗಳನ್ನು ಸುಮಾರು 120 ಕೋಟಿ ಮುಂಗಡ ನೀಡಿ ಪಡೆದಿದೆ ಎನ್ನಲಾಗಿದೆ. ತೆಲುಗು ಭಾಷೆಯಲ್ಲದ ಸಿನಿಮಾಗಳಲ್ಲಿ ಇಷ್ಟು ದೊಡ್ಡ ಮೊತ್ತಕ್ಕೆ ವಿತರಣಾ ಹಕ್ಕು ಮಾರಾಟವಾಗಿರುವುದು ಅಪರೂಪ ಎಂದು ಹೇಳಲಾಗುತ್ತಿದೆ. ಹಲವು ವಿತರಕರ ನಡುವೆ ಪೈಪೋಟಿ ನಡೆದ ಬಳಿಕ ಈ ಹಕ್ಕು ದಿಲ್ ರಾಜು ಅವರ ಪಾಲಾಗಿದೆ.
ಇದನ್ನೂ ಓದಿ:
ಗೀತು ಮೋಹನ್ ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಹಲವು ನಟಿಯರು ಅಭಿನಯಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ.



