June 14, 2026
Sunday, June 14, 2026
spot_img

CINE | ಸಾಯಿ ಪಲ್ಲವಿ ಸ್ಥಾನಕ್ಕೆ ರುಕ್ಕಮ್ಮ? ರುಕ್ಮಿಣಿ ಕೈಸೇರಿತಾ ಹೊಸ ಬಯೋಪಿಕ್ ಸಿನಿಮಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ನಟಿ ರುಕ್ಮಿಣಿ ವಸಂತ್ ಅವರ ಸಿನಿಮಾ ಪಯಣ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ವೇಗ ಪಡೆದುಕೊಂಡಿದೆ. ‘ಸಪ್ತ ಸಾಗರದಾಚೆ ಎಲ್ಲೊ’ ಚಿತ್ರದ ಯಶಸ್ಸಿನ ನಂತರ ಅವರಿಗೆ ವಿವಿಧ ಭಾಷೆಗಳಿಂದ ಅವಕಾಶಗಳು ಹೆಚ್ಚುತ್ತಿವೆ. ಈಗ ಅವರ ಹೆಸರು ಒಂದು ದೊಡ್ಡ ಬಯೋಪಿಕ್ ಸುತ್ತ ಮತ್ತೆ ಚರ್ಚೆಗೆ ಬಂದಿದೆ.

ವರದಿಗಳ ಪ್ರಕಾರ, ಖ್ಯಾತ ಗಾಯಕಿ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಜೀವನ ಆಧಾರಿತ ಸಿನಿಮಾದಲ್ಲಿ ಮೊದಲು ಸಾಯಿ ಪಲ್ಲವಿ ನಟಿಸಬೇಕಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಅವರು ಈ ಪ್ರಾಜೆಕ್ಟ್‌ನಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಆ ಪಾತ್ರಕ್ಕೆ ರುಕ್ಮಿಣಿ ವಸಂತ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹರಡಿದೆ.

ಇದನ್ನೂ ಓದಿ:

ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಘೋಷಣೆ ಬಂದಿಲ್ಲ. ಚಿತ್ರವನ್ನು ಗೌತಮ್ ತಿನ್ನನೂರಿ ನಿರ್ದೇಶಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ರುಕ್ಮಿಣಿ ವಸಂತ್ ಜೂ. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಬಾಲಿವುಡ್ ಮತ್ತು ತಮಿಳು ಪ್ರಾಜೆಕ್ಟ್‌ಗಳಲ್ಲೂ ಅವರು ಕೆಲಸ ಮಾಡುತ್ತಿದ್ದಾರೆ. ಈ ಬಯೋಪಿಕ್ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲಿಗಲ್ಲಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !