April 4, 2026
Saturday, April 4, 2026
spot_img

CINE | ರುಕ್ಕು ಕೈಸೇರಿದೆ ಮತ್ತೊಂದು ಬಿಗ್‌ ಪ್ರಾಜೆಕ್ಟ್: ಸಾಲು ಸಾಲು ಸಿನಿಮಾಗಳಿಗೂ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರತಿಭಾವಂತ ನಟಿಯರಲ್ಲಿ ರುಕ್ಮಿಣಿ ವಸಂತ್ ಹೆಸರು ಈಗ ಮೊದಲ ಸಾಲಿನಲ್ಲಿ ಕೇಳಿಬರುತ್ತಿದೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಈ ನಟಿ, ಇದೀಗ ಮತ್ತೊಂದು ಬೃಹತ್ ಸಿನಿಮಾಕ್ಕೆ ಒಪ್ಪಿಗೆ ಸೂಚಿಸಿದ್ದು, ಸಿನಿ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ಕನ್ನಡ ಚಿತ್ರರಂಗದಿಂದ ದಕ್ಷಿಣ ಭಾರತದ ಇತರ ಭಾಷೆಗಳತ್ತ ತನ್ನ ಪಯಣವನ್ನು ವಿಸ್ತರಿಸುತ್ತಿರುವ ರುಕ್ಮಿಣಿ, ಸದ್ಯ ಹಲವು ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ Toxic ಸಿನಿಮಾದಲ್ಲಿ ನಟಿಸುತ್ತಿರುವ ಅವರು, ಅದೇ ನಿರ್ಮಾಣ ಸಂಸ್ಥೆಯ ಮತ್ತೊಂದು ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:

ಮೂಲಗಳ ಪ್ರಕಾರ, ಕೆವಿಎನ್​ ಪ್ರೊಡಕ್ಷನ್​ ನಿರ್ಮಾಣದ ಹೊಸ ಕನ್ನಡ ಸಿನಿಮಾದಲ್ಲಿ ರುಕ್ಮಿಣಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷವೆಂದರೆ, ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭವಾಗಿದೆ ಎನ್ನಲಾಗಿದೆ. ಚಿತ್ರವನ್ನು ಸಪ್ತ ಸಾಗರದಾಚೆ ಎಲ್ಲೋ ಖ್ಯಾತ ನಿರ್ದೇಶಕ ಹೇಮಂತ್ ಎಂ. ರಾವ್ ನಿರ್ದೇಶಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನೊಂದೆಡೆ, ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ ಟಿ ಆರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹು ನಿರೀಕ್ಷಿತ ಸಿನಿಮಾದಲ್ಲೂ ರುಕ್ಮಿಣಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಗಟ್ಟಿಗೊಳಿಸುವತ್ತ ಅವರು ಹೆಜ್ಜೆ ಇಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !