ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ 60ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಈ ಸಂಭ್ರಮದ ನಡುವೆಯೇ ಅವರು ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಬಹುನಿರೀಕ್ಷಿತ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ ಟೀಸರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಟೀಸರ್‌ನಲ್ಲಿ ಸಲ್ಮಾನ್ ಖಾನ್ ಭಾರತೀಯ ಸೇನೆಯ ಅಧಿಕಾರಿಯಾಗಿ ಶಕ್ತಿಶಾಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮೊದಲ ನೋಟದಲ್ಲೇ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
ಟೀಸರ್ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಲ್ಮಾನ್ ಅಭಿಮಾನಿಗಳು ಮೆಚ್ಚುಗೆಯ ಸುರಿಮಳೆಯನ್ನೇ ಸುರಿಸಿದ್ದಾರೆ. ಗಲ್ವಾನ್ ಕಣಿವೆಯಲ್ಲಿ ನಡೆದ ನೈಜ ಘಟನೆಗಳನ್ನಾಧರಿಸಿದ ಈ ಚಿತ್ರದಲ್ಲಿ, ನಮ್ಮ ಸೈನಿಕರ ಧೈರ್ಯ ಮತ್ತು ತ್ಯಾಗವನ್ನು ತೆರೆ ಮೇಲೆ ತರುವ ಪ್ರಯತ್ನ ಮಾಡಲಾಗಿದೆ.
ಇದನ್ನೂ ಓದಿ:
ಚಿತ್ರವನ್ನು ನಿರ್ದೇಶಕ ಅಪೂರ್ವ ಲಖಿಯಾ ರೂಪಿಸಿದ್ದು, ಸಲ್ಮಾನ್ ಖಾನ್ ಫಿಲ್ಮ್ಸ್ ಅಡಿಯಲ್ಲಿ ಸಲ್ಮಾ ಖಾನ್ ನಿರ್ಮಿಸಿದ್ದಾರೆ. ನಟಿ ಚಿತ್ರಾಂಗದಾ ಸಿಂಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಮೇಶ್ ರೇಶಮ್ಮಿಯಾ ಅವರ ಹಿನ್ನೆಲೆ ಸಂಗೀತ ದೃಶ್ಯಗಳಿಗೆ ತೀವ್ರತೆ ಹೆಚ್ಚಿಸಿದ್ದು, ಸಿನಿಮಾ ಮೇಲೆ ನಿರೀಕ್ಷೆ ಇನ್ನಷ್ಟು ಹೆಚ್ಚುವಂತೆ ಮಾಡಿದೆ.

