ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ನಡುವೆ ಬ್ರೇಕಪ್ ಆಗಿದೆ ಎನ್ನಲಾದ ವಿಚಾರ ಸಾಕಷ್ಟು ದಿನಗಳಿಂದ ಚರ್ಚೆಯಾಗುತ್ತಿದೆ. ಆದರೆ ಇದುವರೆಗೂ ಇಬ್ಬರೂ ಇದರ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ಇದೀಗ ನಟಿ ಬ್ರೇಕಪ್ ಬಗ್ಗೆ ಮೌನ ಮುರಿದಿದ್ದಾರೆ.
ಹೌದು, ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ಬ್ರೇಕಪ್ ಸುದ್ದಿ ಬಗ್ಗೆ ಮಾತನಾಡಿದ ತಮನ್ನಾ, ಇಲ್ಲಿ ನಾನು ನನ್ನ ವೈಯಕ್ತಿಕ ಜೀವನವನ್ನು ಖಾಸಗಿಯಾಗಿಡಲು ಬಯಸುತ್ತೇನೆ. ಎಲ್ಲಿ ಯಾವ ವಿಷಯವನ್ನು ಹೇಳಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ . ನನ್ನ ಕಡೆಯಿಂದ ಯಾರ ಬಗ್ಗೆಯೂ ಹಾಗೂ ಯಾವುದರ ಬಗ್ಗೆಯೂ ದೂರುಗಳಿಲ್ಲ ಎಂದು ಹೇಳಿದ್ದಾರೆ.