January15, 2026
Thursday, January 15, 2026
spot_img

CINE | ತಲೈವಾ-ಕಮಲ್ ಜುಗಲ್‌ಬಂದಿ: ಸಂಕ್ರಾಂತಿ ಸಂಭ್ರಮದಲ್ಲಿ ಬಿಗ್ ಅಪ್‌ಡೇಟ್ ಕೊಟ್ಟ ರಜನಿಕಾಂತ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿರುವ ಸೂಪರ್‌ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಡಬಲ್ ಧಮಾಕಾ ಸಿಕ್ಕಿದೆ. ತಮ್ಮ ನೆಚ್ಚಿನ ನಟನ 173ನೇ ಸಿನಿಮಾದ ಬಗ್ಗೆ ಸ್ವತಃ ತಲೈವಾ ಅವರೇ ಅಧಿಕೃತ ಅಪ್‌ಡೇಟ್ ನೀಡಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಸಂಕ್ರಾಂತಿ ಹಬ್ಬದ ನಿಮಿತ್ತ ಚೆನ್ನೈನ ತಮ್ಮ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಗಳಿಗೆ ಶುಭಾಶಯ ಕೋರಿದ ರಜನಿಕಾಂತ್, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. “ತಲೈವರ್ 173” ಚಿತ್ರದ ಚಿತ್ರೀಕರಣ ಇದೇ ವರ್ಷ ಏಪ್ರಿಲ್ ತಿಂಗಳಿನಿಂದ ಪ್ರಾರಂಭವಾಗಲಿದೆ ಎಂದು ಅವರು ಖಚಿತಪಡಿಸಿದ್ದಾರೆ. ಇದು ಕೇವಲ ಸಿನಿಮಾವಲ್ಲ, ಪ್ರೇಕ್ಷಕರಿಗೆ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಆಗಿರಲಿದೆ ಎಂದು ಭರವಸೆ ನೀಡಿದ್ದಾರೆ.

ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ದಶಕಗಳ ನಂತರ ರಜನಿಕಾಂತ್ ಮತ್ತು ಕಮಲ್ ಹಾಸನ್ ಒಂದೇ ಪ್ರಾಜೆಕ್ಟ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಜನಿಕಾಂತ್ ನಾಯಕನಾಗಿ ನಟಿಸುತ್ತಿದ್ದರೆ, ಕಮಲ್ ಹಾಸನ್ ತಮ್ಮ ‘ರಾಜ್ ಕಮಲ್ ಫಿಲಂಸ್ ಇಂಟರ್ನ್ಯಾಷನಲ್’ ಬ್ಯಾನರ್ ಅಡಿಯಲ್ಲಿ ಈ ಬಿಗ್ ಬಜೆಟ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಆರಂಭದಲ್ಲಿ ನಿರ್ದೇಶಕ ಸುಂದರ್ ಸಿ ಈ ಚಿತ್ರವನ್ನು ನಿರ್ದೇಶಿಸುತ್ತಾರೆ ಎನ್ನಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಅವರು ಹಿಂದೆ ಸರಿದ ಬಳಿಕ, ‘ಡಾನ್’ ಖ್ಯಾತಿಯ ಯುವ ನಿರ್ದೇಶಕ ಸಿಬಿ ಚಕ್ರವರ್ತಿ ಈ ಮೆಗಾ ಪ್ರಾಜೆಕ್ಟ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸುದೀರ್ಘ ಕಾಲದ ಬಳಿಕ ಇಬ್ಬರು ದಿಗ್ಗಜರು ಒಂದಾಗುತ್ತಿರುವುದು ಕಾಲಿವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದ ಕುತೂಹಲಕ್ಕೆ ಕಾರಣವಾಗಿದೆ.

Must Read

error: Content is protected !!