CINE | ಒಂದೇ ಫ್ರೇಮ್ ನಲ್ಲಿ ಕಾಣಿಸಿಕೊಂಡ ಭಾರತೀಯ ಸಿನಿಮಾ ರಂಗದ ದಿಗ್ಗಜರು, ಫೋಟೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಇತ್ತೀಚಿನ ದಿನಗಳಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ‘ಕೌನ್ ಬನೇಗಾ ಕರೋಡ್ಪತಿ’ ಶೋ ಜೊತೆಗೆ ಸಿನಿಮಾಗಳ ಶೂಟ್​ನಲ್ಲೂ ತೊಡಗಿಕೊಂಡಿದ್ದಾರೆ. ಅವರು ಪ್ರಸ್ತುತ ತಮ್ಮ ಮುಂದಿನ ಚಿತ್ರ ವೆಟ್ಟೈಯನ್ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದು ತಮಿಳು ಚಿತ್ರವಾಗಿದ್ದು, ಇದರಲ್ಲಿ ಅವರು ರಜನಿಕಾಂತ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲೈಕಾ ಪ್ರೊಡಕ್ಷನ್ಸ್ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಒಟ್ಟಿಗೆ ಇರುವ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದ ದಿಗ್ಗಜರು. ಮುಂಬೈನಲ್ಲಿ ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ‘ವೆಟ್ಟೈಯನ್’ ಸೆಟ್‌ನಲ್ಲಿದ್ದಾರೆ ”ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಇತ್ತೀಚೆಗಷ್ಟೇ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಣ ತಂಡ ಬಹಿರಂಗಪಡಿಸಿದೆ. ಇದೇ ವರ್ಷ ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದಿದ್ದಾರೆ. ಈ ಚಿತ್ರದಲ್ಲಿ ರಜನಿ ಮತ್ತು ಅಮಿತಾಬ್ ಜೋಡಿಯನ್ನು ಅಭಿಮಾನಿಗಳು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!