CINE | ಬಹುನಿರೀಕ್ಷಿತ ‘ಪುಷ್ಪ 2’ ಚಿತ್ರದ ಪೋಸ್ಟರ್ ರಿಲೀಸ್: ಟೀಸರ್ ಬಿಡುಗಡೆ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಷ್ಪ 2 ಬಿಡುಗಡೆಗೆ ಇಡೀ ತಂಡ ಸಜ್ಜಾಗಿದೆ. ಚಿತ್ರದ ಶೂಟಿಂಗ್ ಕೂಡ ನಡೆಯುತ್ತಿದೆ. ಆಗಸ್ಟ್ 15ರಂದು ಚಿತ್ರ ಬಿಡುಗಡೆಯಾಗಲಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಚಿತ್ರದ ಫಸ್ಟ್ ಲುಕ್ ಗಮನ ಸೆಳೆದಿತ್ತು. ಈಗ ಟೀಸರ್ ಅನ್ನು ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಅದಕ್ಕೂ ಮೊದಲು ಒಂದೊಂದೇ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ.

ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ದೊಡ್ಡ ಬಜೆಟ್‌ನಲ್ಲಿ ಚಿತ್ರವನ್ನು ನಿರ್ಮಿಸುತ್ತಿದೆ. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು. ಮೇ ಅಂತ್ಯದೊಳಗೆ ಚಿತ್ರೀಕರಣ ಮುಗಿಸಲು ಚಿತ್ರತಂಡ ಮುಂದಾಗಿದೆ. ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪೋಸ್ಟರ್ ಸದ್ದು ಮಾಡುತ್ತಿದೆ.

ತ್ರಿಶೂಲಕ್ಕೆ ಕುಂಕುಮ ಮೆತ್ತಿಕೊಂಡಿದೆ. ಹಿಂಭಾಗದಲ್ಲಿ ಅಲ್ಲು ಅರ್ಜುನ್ ಅವರ ಮುಖ ಕಾಣಿಸಿದೆ. ಅವರು ಶಂಖ ಊದುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಈ ಪವರ್​ಫುಲ್ ಪೋಸ್ಟರ್ ಸಖತ್ ಗಮನ ಸೆಳೆದಿದೆ. ಏಪ್ರಿಲ್ 8 ಅಲ್ಲು ಅರ್ಜುನ್ ಅವರ ಬರ್ತ್​ಡೇ. ಆ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಯೋಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!