ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕಳೆದ ವರ್ಷವಷ್ಟೆ ದೇಶದ ಎರಡನೇ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. ಆದರೆ ಇತ್ತೀಚೆಗೆ ಚಿರಂಜೀವಿ ನೀಡಿರುವ ಹೇಳಿಕೆಯೊಂದು ಅವರನ್ನು ವಿವಾದಕ್ಕೆ ದೂಡಿದೆ. ತಮಾಷೆಯ ಧಾಟಿಯಲ್ಲಿ ಆಡಿರುವ ಮಾತಿನಿಂದ ಜನರ ಆಕ್ರೋಶಕ್ಕೆ ಗುರಿ ಆಗಿದ್ದಾರೆ.
ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ‘ನಮ್ಮ ಮನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಮನೆಯಲ್ಲಿದ್ದಾಗ ಮಕ್ಕಳೊಟ್ಟಿಗೆ ಇದ್ದೇನೆ ಎನಿಸುವುದಿಲ್ಲ ಬದಲಿಗೆ ಲೇಡೀಸ್ ಹಾಸ್ಟೆಲ್ನ ವಾರ್ಡನ್ ಆಗಿದ್ದೇನೆ ಅನಿಸುತ್ತದೆ’ ಎಂದು ತಮಾಷೆ ಮಾಡಿದ್ದರು. ರಾಮ್ ಚರಣ್ ಗಂಡು ಮಗುವಿಗೆ ಜನ್ಮ ನೀಡಲಿ ಎಂಬುದು ನನ್ನ ಬಯಕೆ ಆಗಿತ್ತು. ನಮ್ಮ ತಲೆಮಾರನ್ನು ರಾಮ್ ಚರಣ್ ಮಗ ಮುಂದೆ ತೆಗೆದುಕೊಂಡು ಹೋಗಲಿ ಎಂಬುದು ಉದ್ದೇಶವಾಗಿತ್ತು. ಆದರೆ ರಾಮ್ ಚರಣ್ಗೆ ಮಗಳೆಂದರೆ ಪಂಚ ಪ್ರಾಣ ಹಾಗಾಗಿ ರಾಮ್ ಚರಣ್ ಮತ್ತೊಂದು ಹೆಣ್ಣು ಮಗುವಿಗೆ ತಂದೆ ಆಗುತ್ತಾನೇನೋ ಎಂಬ ಭಯ ಇದೆ’ ಎಂದಿದ್ದಾರೆ ನಟ ಚಿರಂಜೀವಿ.