March 29, 2026
Sunday, March 29, 2026
spot_img

CINE | ಶ್ರೀವಲ್ಲಿ ಜೊತೆ ಹುಟ್ಟೂರಿಗೆ ಭೇಟಿಕೊಟ್ಟ ವಿಜಯ್ ದೇವರಕೊಂಡ: ಪ್ರೀತಿಯಿಂದ ಸ್ವಾಗತಿಸಿದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ಜೀವನ ಆರಂಭಿಸಿದ ನಂತರ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ, ತಮ್ಮ ಹುಟ್ಟೂರಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಇವರ ವಿವಾಹವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮದುವೆ ಫೋಟೋಗಳಿಗೆ ಲಕ್ಷಾಂತರ ಲೈಕ್ಸ್ ದೊರೆತಿದ್ದು, ನಂತರ ದಂಪತಿ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಿದ್ದರು.

ಇದನ್ನೂ ಓದಿ:

ಇದೀಗ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ತುಮ್ಮನ್‌ಪೆಟ್ ಗ್ರಾಮಕ್ಕೆ ಭೇಟಿ ನೀಡಿರುವ ದಂಪತಿಗೆ ಗ್ರಾಮಸ್ಥರು ಆತ್ಮೀಯ ಸ್ವಾಗತ ನೀಡಿದ್ದಾರೆ. ವಿಜಯ್ ಅವರ ಫಾರ್ಮ್‌ಹೌಸ್‌ನಲ್ಲಿ ಮಾರ್ಚ್ 2ರಂದು ಸತ್ಯನಾರಾಯಣ ಪೂಜೆ ನೆರವೇರಿಸಲಾಗಿದೆ. ಜೊತೆಗೆ, ಸುಮಾರು 2000ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹಲವಾರು ವರ್ಷಗಳಿಂದ ಪ್ರೀತಿಯಲ್ಲಿ ಇದ್ದ ವಿಜಯ್–ರಶ್ಮಿಕಾ ತಮ್ಮ ಸಂಬಂಧವನ್ನು ಇತ್ತೀಚೆಗೆ ವೈವಾಹಿಕ ಬಾಂಧವ್ಯಕ್ಕೆ ಕೊಂಡೊಯ್ದಿದ್ದಾರೆ. ಇಬ್ಬರೂ ಒಟ್ಟಾಗಿ ಹೊಸ ಸಿನಿಮಾದಲ್ಲೂ ಅಭಿನಯಿಸುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !