July 28, 2026
Tuesday, July 28, 2026
spot_img

CINE | ಅಲ್ಲು ಅರ್ಜುನ್ ಬರ್ತ್​​ಡೇಗೆ ಸಿಗುತ್ತಾ ಸರ್ಪ್ರೈಸ್? ಕಾಯ್ತಿದ್ದಾರೆ ಅಭಿಮಾನಿ ದೇವರುಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 8 ಸಮೀಪಿಸುತ್ತಿದ್ದಂತೆ ಅಲ್ಲು ಅರ್ಜುನ್ ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. ಈ ಬಾರಿ ಅವರ ಹುಟ್ಟುಹಬ್ಬದ ಅಂಗವಾಗಿ ದೊಡ್ಡ ಘೋಷಣೆ ಒಂದನ್ನು ಮಾಡಲು ಚಿತ್ರತಂಡ ಸಜ್ಜಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ನಿರ್ದೇಶಕ ಅಟ್ಲೀ ಜೊತೆ ಅವರು ಮಾಡುತ್ತಿರುವ ಬಹುನಿರೀಕ್ಷಿತ ಚಿತ್ರದ ಶೀರ್ಷಿಕೆಯನ್ನು ಇದೇ ದಿನ ಪ್ರಕಟಿಸುವ ಸಾಧ್ಯತೆ ಇದೆ. ಚಿತ್ರ ತಂಡ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಸಿದ್ಧವಾಗಿದ್ದು, ಕೇವಲ ಪೋಸ್ಟರ್ ಮಾತ್ರವಲ್ಲದೆ ಟೈಟಲ್ ಟೀಸರ್ ಅಥವಾ ಚಿಕ್ಕ ವೀಡಿಯೊ ಝಲಕ್ ಬಿಡುಗಡೆ ಮಾಡುವ ಪ್ರಯತ್ನದಲ್ಲಿದೆ. ಆದರೆ ತಾಂತ್ರಿಕ ಕೆಲಸಗಳು ಇನ್ನೂ ಪೂರ್ಣಗೊಳ್ಳದ ಕಾರಣ, ಅಂತಿಮ ನಿರ್ಧಾರ ಸ್ಪಷ್ಟವಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:

‘ಪುಷ್ಪ 2’ ಬಳಿಕ ಬರುತ್ತಿರುವ ಈ ಚಿತ್ರಕ್ಕೆ ಈಗಾಗಲೇ ಭಾರಿ ನಿರೀಕ್ಷೆ ಮೂಡಿದೆ. ಸುಮಾರು 800 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ ಎಂದು ವರದಿಯಾಗಿದ್ದು, ಇದು ದೊಡ್ಡ ಮಟ್ಟದ ಪ್ರಾಜೆಕ್ಟ್ ಆಗಿ ಹೊರಹೊಮ್ಮುತ್ತಿದೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ ಮತ್ತು ಜಾನ್ವಿ ಕಪೂರ್ ನಟಿಸುವ ಸಾಧ್ಯತೆ ಇದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇನ್ನೊಂದು ವಿಶೇಷವೆಂದರೆ, ಈ ಸಿನಿಮಾಗಾಗಿ ‘ಪ್ಯಾರಲಲ್ ಯೂನಿವರ್ಸ್’ ಎಂಬ ವಿಭಿನ್ನ ಕಾನ್ಸೆಪ್ಟ್ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಅಲ್ಲು ಅರ್ಜುನ್ ಅವರು ಚಿತ್ರರಂಗದಲ್ಲಿ 23 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮತ್ತಷ್ಟು ವಿಶೇಷವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !