CINE | ‘ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು, ಶೀಘ್ರವೇ ಭೇಟಿಯಾಗುತ್ತೇನೆ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರು ಬೆಳಕು, ಶೀಘ್ರದಲ್ಲಿ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.

ಫೆ.16 ರಂದು ದರ್ಶನ್‌ ಅವರು 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಏನು ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!