Wednesday, March 29, 2023

Latest Posts

ವಿಶ್ವನಾಥ್‌ಗೆ ಗೌರವ ನಮನ: ಪ್ರಧಾನಿ ಸೇರಿದಂತೆ ರಾಜಕೀಯ ಗಣ್ಯರಿಂದಲೂ ಶ್ರದ್ಧಾಂಜಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಲಾತಪಸ್ವಿ ಕೆ.ವಿಶ್ವನಾಥ್ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಭಾರತೀಯ ಕಲೆ, ಸಾಹಿತ್ಯ, ಸಂಗೀತಕ್ಕೆ ಪ್ರಾಮುಖ್ಯತೆ ನೀಡಿ ನಮ್ಮ ಸಂಸ್ಕೃತಿಯನ್ನು ಚಿತ್ರಗಳ ಮೂಲಕ ಜಗತ್ತಿಗೆ ಪರಿಚಯಿಸಿದವರು ಕೆ.ವಿಶ್ವನಾಥ್. ರಾಜಮೌಳಿಗಿಂತ ಮೊದಲು ತೆಲುಗು ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ನಿರ್ದೇಶಕ ವಿಶ್ವನಾಥ್.

ತಮ್ಮ 50 ಚಿತ್ರಗಳಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿರುವ ವಿಶ್ವನಾಥ್ ಅವರು ಇದೇ ಗುರುವಾರ (ಫೆಬ್ರವರಿ 2) ರಾತ್ರಿ ಕೊನೆಯುಸಿರೆಳೆದಿದ್ದಾರೆ. ವಿಶ್ವನಾಥ್ ನಿಧನಕ್ಕೆ ಚಿತ್ರರಂಗ ಅಷ್ಟೇ ಅಲ್ಲದೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ, ಜಗನ್ ಮೋಹನ್ ರೆಡ್ಡಿ, ಚಂದ್ರಬಾಬು ನಾಯ್ಡು, ಮೆಗಾಸ್ಟಾರ್ ಚಿರಂಜೀವಿ, ಮಹೇಶ್ ಬಾಬು ಸೇರಿದಂತೆ ಕೆಲವು ಸ್ಟಾರ್ ಹೀರೋಗಳು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!