Monday, March 4, 2024

CINEMA | ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಕಾಂತಾರ ಬೆಡಗಿ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಕಾಂತಾರ ಬೆಡಗಿ ಸಪ್ತಮಿ ಗೌಡ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಕೊಡಲಿದ್ದಾರೆ ಎಂದು ವರದಿಯಾಗಿತ್ತು. ಇದು ಈಗ ನಿಜವಾಗಿದೆ. ಸಪ್ತಮಿ ತಮ್ಮುಡು ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಚಿತ್ರದ ಶೂಟಿಂಗ್ ಶುರುವಾಗಿದೆ.

ಈ ಹಿಂದೆ, ಸಪ್ತಮಿ ಗೌಡ ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ಈಗ ತಮಡು ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳಲ್ಲಿ ನಟಿಸಲು ಒಪ್ಪಿಕೊಂಡಾಗ ಬಹುಭಾಷಾ ತಾರೆಯಾದರು. ಇದಲ್ಲದೇ ಮೂರು ಕನ್ನಡ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಯುವರಾಜ್ ಕುಮಾರ್ ಅಭಿನಯದ ಯುವ ಚಿತ್ರದಲ್ಲಿ ಸಪ್ತಮಿ ಗೌಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಈ ಚಿತ್ರದಲ್ಲಿ ಸಿರಿ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಸಪ್ತಮಿ ಕಾಲೇಜು ಹುಡುಗಿಯ ಪಾತ್ರ ಮಾಡುತ್ತಿದ್ದಾರೆ. ಯುವರಾಜ್ ಕುಮಾರ್ ಈ ಚಿತ್ರದ ಮೂಲಕ ಪಾದಾರ್ಪಣೆ ಆಗುತ್ತಿದ್ದು, ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!