Saturday, July 2, 2022

Latest Posts

ಕೊರೋನಾ ಸೋಂಕಿಗೆ ಸಿನಿಮಾ ನಿರ್ಮಾಪಕ ಬಲಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನಿಂದ ಕನ್ನಡ ಸಿನಿಮಾ ಯುವ ನಿರ್ಮಾಪಕ ಹಾಗೂ ನಟ ಡಾ ಡಿ ಎಸ್ ಮಂಜುನಾಥ್ ಅವರು ಭಾನುವಾರ ಮೃತಪಟ್ಟಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.
ಕಳೆದ ಶುಕ್ರವಾರ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಪಾಸಿಟವ್ ಕಂಡು ಬಂದಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಡಾ ಡಿ ಎಸ್ ಮಂಜುನಾಥ್ ಅವರು ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಿಸಿದ್ದರು. ಅಲ್ಲದೇ ಪ್ರಸಂಟ್ ಪ್ರಪಂಚ, 0% ಲವ್ ಸಿನಿಮಾದಲ್ಲಿ ನಾಯಕನಾಗಿಯೂ ನಟಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss