ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಎಲ್ಲಾ ಸಿಂಗಲ್ ಸ್ಕ್ರೀನ್ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ಬೆಲೆ 200 ರೂ. ಮಿತಿ ನಿಗದಿಗೊಳಿಸುವ ನಿಯಮವನ್ನು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಪ್ರಕಟಿಸಿದೆ. ಸರ್ಕಾರ ಹೊರಡಿಸಿರುವುದು ಅಧಿಸೂಚನೆಯೇ ಹೊರತು ಆದೇಶವಲ್ಲ. ಆದ್ರೆ, ಸರ್ಕಾರದ ಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ.ನರಸಿಂಹಲು ಮಾತನಾಡಿ, ರಾಜ್ಯ ಸರ್ಕಾರ ಎಲ್ಲಾ ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ 200 ರೂಪಾಯಿ ಮಾಡಲು ಮುಂದಾಗಿದೆ. ಇದು ಚಿತ್ರರಂಗದ ಬೆಳವಣಿಗೆಗೆ ಸಹಕಾರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.