ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ಹಾಗೂ ಉದಯಪುರದಲ್ಲಿ ನಡೆಯುತ್ತಿದ್ದ ‘ಡೆವಿಲ್’ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ ಎನ್ನಲಾಗಿದೆ. ಅಪರೂಪದ ತಾಣಗಳಲ್ಲಿ ಕಳೆದೊಂದು ವಾರದಿಂದ ‘ಡೆವಿಲ್’ ಸಿನಿಮಾದ ಮೂರನೇ ಹಂತದ ಶೂಟಿಂಗ್ ಭರದಿಂದ ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ ಕೊನೆಯಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದ್ದು, ಪ್ರಕಾಶ್ ವೀರ್ ನಿರ್ದೇಶನ, ನಿರ್ಮಾಣದ ಚಿತ್ರವಿದು. ಮಾಸಾಂತ್ಯಕ್ಕೆ ಹಾಡುಗಳ ಚಿತ್ರೀಕರಣವೂ ಅಂತ್ಯವಾಗುವ ನಿರೀಕ್ಷೆ. ಮೂಲಗಳ ಪ್ರಕಾರ ದರ್ಶನ್ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ ಎನ್ನಲಾಗಿದೆ.
ದರ್ಶನ್ ಜೊತೆ ನಾಯಕಿ ರಚನಾ ರೈ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶರ್ಮಿಳಾ ಮಾಂಡ್ರೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಗುರುತಿಸಿಕೊಂಡ ಕಾರಣ ಕಳೆದ 9 ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿ ಹೊರರಾಜ್ಯಕ್ಕೆ ಪ್ರಯಾಣಿಸುತ್ತಿದ್ದಾರೆ.