ಪೊಲೀಸರ ಮೇಲೆ ಗಾಂಜಾ ದಂಧೆಕೋರರ ಅಟ್ಟಹಾಸ: ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಕಲಬುರಗಿ:

ಪೊಲೀಸರ ಮೇಲೆಯೇ ಮಾರಣಾಂತಿಕ ದಾಳಿ ಮಾಡುವ ಮೂಲಕ ಗಾಂಜಾ ದಂದೆಕೋರರು ಅಟ್ಟಹಾಸ ಮೇರೆದಿರುವ ಘಟನೆ ಮಹಾರಾಷ್ಟ್ರ – ಕರ್ನಾಟಕ ಗಡಿಭಾಗದ ಹೊನ್ನಾಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ.

ಶ್ರೀಮಂತ ಇಲ್ಲಾಳ‌ ಅವರ ಹೊಟ್ಟೆ, ತೆಲೆ ಸೇರಿ ದೇಹದ ಹಲವಡೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಬಸವಕಲ್ಯಾಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ವಿನ ಚಿಕಿತ್ಸೆಗಾಗಿ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಯೆ ನೀಡಲಾಗುತ್ತಿದೆ. ಕೇಲ ಪೊಲೀಸ್ ಸಿಬ್ಬಂದಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

ಘಟನೆ ವಿವರ:-

ಕಳೆದ ಎರಡು ದಿನಗಳ ಹಿಂದೆ ಕಮಲಾಪುರ ತಾಲ್ಲೂಕಿನ ದಸ್ತಾಪುರ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕಲಬುರಗಿಯ ನವೀನ ಹಾಗೂ ಬಸವಕಲ್ಯಾಣ ತಾಲೂಕು ಭೋಸಗಾದ ಸಂತೋಷ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಇವರು ನೀಡಿದ ಮಾಹಿತಿ ಆಧಾರದ ಮೇಲೆ ಗಾಂಜಾ ಬೆಳೆಯ ಮೂಲಸ್ಥಾನ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಹೊನ್ನಾಳಿ ಜಮೀನೊಂದರ ಮೇಲೆ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ ನೇತೃತ್ವದ 10 ಜನರ ತಂಡ ದಾಳಿ ನಡೆಸಿತ್ತು.

ಈ ವೇಳೆ ಕಟ್ಟಿಗೆ ಕಲ್ಲು ಸಮೇತ ದಿಢೀರನೇ ಪ್ರತ್ಯಕ್ಷವಾದ ಸುಮಾರು 40 ಜನರಿದ್ದ ದುಷ್ಕರ್ಮಿಗಳ ತಂಡ ಕೈಗೆ ಸಿಕ್ಕ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಸಿಪಿಐ ಶ್ರೀಮಂತ ಇಲ್ಲಾಳ ಅವರು ಗಂಭೀರ ಗಾಯಗೊಂಡಿದ್ದಾರೆ. ಮಹಾಗಾಂವ ಪಿಎಸ್ಐ ಆಶಾ ರಾಠೋಡ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿವೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!