Tuesday, March 28, 2023

Latest Posts

ಸರಕಾರ ರಚಿಸಲು ಸರ್ಕಸ್: ಅಮಿತ್ ಶಾಗೆ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೇಘಾಲಯದ ಚುನಾವಣಾ ಫಲಿತಾಂಶ (Meghalaya Election Result) ಬಹುತೇಕ ಅಂತಿಮಗೊಂಡಿದ್ದು, ಇದರ ಬೆನ್ನಲ್ಲೇ ಮೇಘಾಲಯ (Meghalaya) ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ (Conrad Sangma) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ .

ಅಮಿತ್ ಶಾ ಅವರಿಗೆ ಕರೆ ಮಾಡಿ ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕೋರಿದ್ದಾರೆ. ಸಂಗ್ಮಾ ನೇತೃತ್ವದ ಎನ್​ಪಿಪಿ ಬಹುಮತಕ್ಕೆ ಬೇಕಿರುವ ಸ್ಥಾನಗಳಿಗಿಂತ ಕೆಲವು ಸೀಟು ಕಡಿಮೆ ಹೊಂದಿದೆ. ಹೀಗಾಗಿ ಬಿಜೆಪಿ ಹಾಗೂ ಪಕ್ಷೇತರರ ನೆರವಿನಿಂದ ಸರ್ಕಾರ ರಚಿಸುವ ಲೆಕ್ಕಾಚಾರ ಹಾಕುತ್ತಿದೆ.

ಸಂಗ್ಮಾ ಅವರ ಪಕ್ಷ 20 ಸ್ಥಾನಗಳಲ್ಲಿ ಗೆದ್ದಿರುವ ಬಗ್ಗೆ ಅಧಿಕೃತ ಘೋಷಣೆಯಾಗಿದೆ. 6 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವ ಭರವಸೆ ಹೊಂದಿದ್ದಾರೆ. ಹೀಗಾಗಿ ಸಂಗ್ಮಾ ಅವರು ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ.

60 ಸ್ಥಾನಗಳ ಮೇಘಾಲಯ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸ್ಥಾನ ಅಗತ್ಯವಿದೆ. ಯುಡಪಿ 11 ಸ್ಥಾನ, ಕಾಂಗ್ರೆಸ್ ಹಾಗೂ ಟಿಎಂಸಿ ತಲಾ 5, ಬಿಜೆಪಿ 2 ಹಾಗೂ ಪಕ್ಷೇತರರು 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಅಮಿತ್ ಶಾ ಅವರಿಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!