ಸರ್ಕಾರ ರಕ್ಷಿಸಲು ಸರ್ಕಸ್: ಕುತೂಹಲ ಕೆರಳಿಸಿದೆ ಶಿವಸೇನೆ ಕಾರ್ಯಕಾರಿಣಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತೊಂದು ಮಗ್ಗುಲು ಬದಲಿಸಿದ್ದು, ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆ ಇಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದೆ.
ಈ ಸಭೆಯಲ್ಲಿ ಮುಂದಿನ ನಡೆಯ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಭೆ ಆರಂಭಗೊಳ್ಳಲಿದ್ದು, ಬಂಡಾಯ ಶಾಸಕರ ವಿರುದ್ಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಜೊತೆಗ ಬಂಡಾಯ ಶಿವಸೇನೆ ಶಾಸಕರಿಗೆ ಅನರ್ಹತೆ ನೋಟಿಸ್ ಕಳುಹಿಸುವ ಸಾಧ್ಯತೆಗಲೂ ದಟ್ಟವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!