ಸಿಐಎಸ್‌ಸಿಇ ಫಲಿತಾಂಶ ಪ್ರಕಟ: ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗು ಗುರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ ಸಿಐಎಸ್‌ಸಿಇ 10ನೇ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 99.97 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕರ ಉತ್ತೀರ್ಣ ಪ್ರಮಾಣ ಶೇ.99.97. ಈ ಬಾರಿ ಪರೀಕ್ಷೆಗೆ 2,31,063 ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಇವರಲ್ಲಿ 1,25,678 ಬಾಲಕರು, 1,05,385 ಬಾಲಕಿಯರು. ಚಂಡೀಗಢ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ನವದೆಹಲಿ ಮತ್ತು ಓರಿಸ್ಸಾ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳನ್ನು ಒಳಗೊಂಡಿರುವ ಉತ್ತರ ಪ್ರದೇಶಗಳಿಂದ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!