RECRUITMENT | ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 451 ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 451 ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ 22,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಎಸ್‌ಬಿಐ ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.cisfrectt.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!