ʼಸಿದ್ದು ನಿಜಕನಸುಗಳುʼ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್‌ ಕೋರ್ಟ್ ತಡೆಯಾಜ್ಞೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಪುರಭವನದಲ್ಲಿ ಇಂದು ಲೋಕಾರ್ಪಣೆಗೊಳ್ಳಬೇಕಿದ್ದ ʼಸಿದ್ದು ನಿಜ ಕನಸುಗಳುʼ ಪುಸಕ್ತ ಬಿಡುಗಡೆಗೆ ಸಿಟಿ ಸಿವಿಲ್‌ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ, ಐಟಿ ಬಿಟಿ ವಿಜ್ಞಾನ, ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿಎನ್‌ ಅಶ್ವತ್ಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡುವ ಯೋಜನೆಯಿತ್ತು.

ಆದರೆ ಇದೀಗ ಕಾರ್ಯಕ್ರಮಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಕಾರ್ಯಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ನ್ಯಾಯಾಲಯದಲ್ಲಿ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!