spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕುಶಾಲನಗರ: ಅಕಾಲಿಕ ಮಳೆಗೆ‌ ಮನೆ ಕುಸಿತ

- Advertisement -Nitte

ಹೊಸ ದಿಗಂತ ವರದಿ, ಕುಶಾಲನಗರ:

ಇತ್ತೀಚೆಗೆ ಸುರಿದ ಅಕಾಲಿಕ‌ ಮಳೆಗೆ ಮನೆಯೊಂದು ಕುಸಿದಿರುವ ಘಟನೆ ಇಲ್ಲಿಗೆ ಸಮೀಪದ ಭುವನಗಿರಿ ಗ್ರಾಮದಲ್ಲಿ ನಡೆದಿದೆ.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ನಿವಾಸಿ ರೇಣುಕಾ ಸ್ವಾಮಿ ಎಂಬವರ ಮನೆಯ ಗೋಡೆ ಭಾರಿ ಮಳೆಯಿಂದಾಗಿ ಎರಡೂ ಭಾಗದಲ್ಲೂ ನೆಲಕ್ಕೆ ಉರುಳಿದೆ.
ಸ್ಧಳಕ್ಕೆ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಮತ್ತು ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳಿಂದ ಜಂಟಿ ಸರ್ವೆ: ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಳೆದ 20 ದಿನಗಳಿಂದ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಬೆಳೆ ಸಮೀಕ್ಷೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸುತ್ತಿದೆ.
ಶಿರಂಗಾಲ, ತೊರೆನೂರು,ಹೆಬ್ಬಾಲೆ, ಹುದುಗೂರು, ಕೂಡಿಗೆ, ಕೂಡುಮಂಗಳೂರು, ಚಿಕ್ಕತ್ತೂರು, ದೊಡ್ಡತ್ತೂರು, ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಮೀಕ್ಷಾ ತಂಡ ಆ ವ್ಯಾಪ್ತಿಯ ಜೋಳ,ಶುಂಠಿ, ಕಾಫಿ ಬೆಳೆಗಳು ಹಾಳಾಗಿರುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಕಲೆಹಾಕಿದೆ.ಅಲ್ಲದೆ ರೈತರು ತಮ್ಮ ಬೆಳೆ ಹಾಳಾಗಿರುವ ಮಾಹಿತಿಯ ಜೊತೆಗೆ ಕಂದಾಯ ಮತ್ತು ಕೃಷಿ ಇಲಾಖೆಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಮನವಿಯನ್ನು ಮಾಡಿದೆ.
ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ಸಂತೋಷ್, ತೋಟಗಾರಿಕೆ ಇಲಾಖೆ ಅಧಿಕಾರಿ ಕಾವ್ಯ, ಕೃಷಿ ಇಲಾಖೆಯ ಶಾರದಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಪೀರ್ ಮಹಮ್ಮದ್, ಗೌತಮ್, ಕಾಫಿ ಮಂಡಳಿ ಅಧಿಕಾರಿ ವರ್ಗದವರು ಸೇರಿ ಜಂಟಿ ಸರ್ವೆ ನಡೆಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss