ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಕಿರಿಕ್ ಬಳಿಕ ಮೊದಲ ಬಾರಿ ಬೆಳಗಾವಿಗೆ ಎಂಟ್ರಿ ಕೊಟ್ಟ ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಬೆಳಗಾವಿ ಚಳಿಗಾಲ ಅಧಿವೇಶನದ ಕೊನೆಯ ದಿನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಈ ಘಟನೆ ಬಳಿಕ ಸಿ.ಟಿ.ರವಿ ಇದೇ ಮೊದಲ ಬಾರಿಗೆ ಬೆಳಗಾವಿಗೆ ಕಾಲಿಟ್ಟಿದ್ದಾರೆ.

ತಮ್ಮ ಪತ್ನಿಯೊಂದಿಗೆ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ದಕ್ಷಿಣ ಕಪಿಲೇಶ್ವರ ದೇವಾಲಯದಲ್ಲಿ ಜಲಾಭಿಷೇಕ ಮಾಡಿದ್ದೇನೆ. ನನ್ನೊಳಿಗಿನ ಕೆಟ್ಟ ಗುಣಗಳು ದೂರವಾಗಲಿ. ನಮ್ಮಿಂದ ಯಾರಿಗೂ ಕೆಟ್ಟದ್ದು ಆಗೋದು ಬೇಡ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.

ಹೆಬ್ಬಾಳ್ಕರ್ ರಿಂದ ಧರ್ಮಸ್ಥಳಕ್ಕೆ ಬನ್ನಿ ಎಂದು ಸವಾಲ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ವಿಚಾರದ ಬಗ್ಗೆ ನಾನು ಹೇಳಲ್ಲ‌. ಎಲ್ಲರಿಗೂ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!