ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಮಾತು ಕ್ರಿಮಿನಲ್ ಆಫೆನ್ಸ್: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿಚಾರ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು .

ಈ ವೇಳೆ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಹೋರಾಟ ಮಾಡಿದ್ದೂ, ಈ ಸಂದರ್ಭ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಈ ಕುರಿತು ರಿಯಾಕ್ಷನ್ ನೀಡಿದ ಸಿಎಂ ಸಿದ್ದರಾಮಯ್ಯ , ಸಿ ಟಿ ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಇದೊಂದು ಕ್ರಿಮಿನಲ್ ಆಫೆನ್ಸ್ ಆಗಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಮಾತಿಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂಬಂಧಪಟ್ಟ ಸಭಾಪತಿಗೆ ದೂರು ಕೊಟ್ಟಿದ್ದಾರೆ. ಪೊಲೀಸ್ ಠಾಣೆಯಲು ದೂರು ಸಲ್ಲಿಕೆ ಮಾಡುತ್ತಾರೆ. ಪೊಲೀಸರು ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ ಇದು ಕ್ರಿಮಿನಲ್ ಅಫೆನ್ಸ್ ಆಗಿದೆ ಎಂದು ತಿಳಿಸಿದರು.

ಸಿಟಿ ರವಿ ಅವರ ಈ ರೀತಿ ಪದ ಬಳಕೆ ಮಾಡಿದ್ದರಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಹಳ ನೊಂದುಕೊಂಡಿದ್ದಾರೆ. ಹಾಗಾಗಿ ಲಕ್ಷ್ಮಿ ಬಾಳ್ಕರ್ ಅವರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು ಅಲ್ಲದೆ ಪೊಲೀಸರು ದೂರು ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!