ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರ ಮತ್ತು ಚಂಡೀಗಢ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ 24 ವಿಮಾನ ನಿಲ್ದಾಣಗಳಲ್ಲಿ ಮೇ 15 ರವರೆಗೆ ನಾಗರಿಕ ವಿಮಾನ ಹಾರಾಟ ಬಂದ್ ಮಾಡಲಾಗಿದೆ.
ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ಪಾಕ್ ಬೆದರಿಕೆ ಪೀಡಿತ ಸ್ಥಳಗಳಿಗೆ ವಿಮಾನಗಳ ಸೇವೆಯನ್ನು ರದ್ದುಗೊಳಿಸಿದ್ದು, ಪ್ರಯಾಣಿಕರಿಗೆ ಮರು ಪಾವತಿಯ ಆಫರ್ ನೀಡಿವೆ.
ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ಹಿನ್ನೆಲೆಯಲ್ಲಿ ಮೇ 10 ರವರೆಗೆ ನಾಗರಿಕ ವಿಮಾನಗಳಿಗಾಗಿ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಹೊಸ ಆದೇಶದ ನಂತರ ಮೇ 15 ರವರೆಗೆ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಕಾರಣ ತಮ್ಮ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ಶುಕ್ರವಾರ ತಿಳಿಸಿವೆ.