August 2, 2026
Sunday, August 2, 2026
spot_img

ಕಲಬುರಗಿಯಲ್ಲಿ ಸಿವಿಲ್ ಪೊಲೀಸ್ ಪೇದೆ ಪರೀಕ್ಷೆ ಯಶಸ್ವಿ: 1,415 ಅಭ್ಯರ್ಥಿಗಳ ಗೈರು

ಹೊಸದಿಗಂತ ವರದಿ ಕಲಬುರಗಿ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ನಡೆದ ಸಿವಿಲ್ ಪೊಲೀಸ್ ಪೇದೆ (ಸಿಪಿಸಿ) ನೇಮಕಾತಿ ಪರೀಕ್ಷೆಗೆ ಒಟ್ಟು 1,415 ಅಭ್ಯರ್ಥಿಗಳು ಗೈರಾಗಿದ್ದಾರೆ.

ಬೆಳಗಿನ ಅವಧಿಯ ಪರೀಕ್ಷೆಗೆ 15,702 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರೆ, ಅವರಲ್ಲಿ 14,942 ಅಭ್ಯರ್ಥಿಗಳು ಹಾಜರಾಗಿದ್ದು, 760 ಅಭ್ಯರ್ಥಿಗಳು ಗೈರಾಗಿದ್ದರು. ಮಧ್ಯಾಹ್ನದ ಅವಧಿಯ ಪರೀಕ್ಷೆಗೆ 14,370 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 13,715 ಅಭ್ಯರ್ಥಿಗಳು ಪರೀಕ್ಷೆ ಬರೆದರೆ, 655 ಅಭ್ಯರ್ಥಿಗಳು ಗೈರಾಗಿದ್ದಾರೆ.

ಇದನ್ನೂ ಓದಿ:

ಎರಡೂ ಅವಧಿಗಳನ್ನು ಸೇರಿಸಿ ಒಟ್ಟು 30,072 ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗಿತ್ತು. ಇದರಲ್ಲಿ 28,657 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1,415 ಅಭ್ಯರ್ಥಿಗಳು ಪರೀಕ್ಷೆಯಿಂದ ದೂರ ಉಳಿದಿದ್ದಾರೆ. ಒಟ್ಟಾರೆ ಹಾಜರಾತಿ ಪ್ರಮಾಣ ಶೇ.95ಕ್ಕೂ ಅಧಿಕ ದಾಖಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದರು.

ನಗರದ ಸುಮಾರು 40 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ನಡುವೆ ಪರೀಕ್ಷಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು. ಮೆಟಲ್ ಡಿಟೆಕ್ಟರ್ ತಪಾಸಣೆ, ಸಿಸಿಟಿವಿ ನಿಗಾ ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮೂಲಕ ಪರೀಕ್ಷೆಯನ್ನು ಅಕ್ರಮರಹಿತವಾಗಿ ನಡೆಸಲಾಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !