ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಅವರು ಮನೆಯಿಂದ ಹೊರಗಡೆ ಬರುತ್ತಿದ್ದಂತೆ ಕಾರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಬಜೆಟ್ ನಲ್ಲೂ ಕೂಡ ಈ ವಿಷಯ ಪ್ರಸ್ತಾಪಿಸಿಲ್ಲ. ಪ್ರಸಕ್ತ ಅಧಿವೇಶನ ಪೂರ್ಣಗೊಳ್ಳುವ ವೇಳೆಗೆ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವಂತೆ ಕೋರಿದರು.
ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಹರಿಸುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದರು.