ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ನಾಗರಿಕರ ಸಾವು: ಸಂಬಂಧಿಕರಿಗೆ ಉದ್ಯೋಗ ಘೋಷಿಸಿದ ಕಾಶ್ಮೀರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರ ಆಡಳಿತವು ಪೂಂಚ್ ಜಿಲ್ಲೆಯ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟ ಮೂವರು ನಾಗರಿಕರ ಸಂಬಂಧಿಕರಿಗೆ ಪರಿಹಾರ ಮತ್ತು ಉದ್ಯೋಗವನ್ನು ಘೋಷಿಸಿದೆ.

ಪೂಂಚ್ ಜಿಲ್ಲೆಯ ಬಫ್ಲಿಯಾಜ್ನಲ್ಲಿ ಶುಕ್ರವಾರ ಮೂವರು ನಾಗರಿಕರ ಸಾವು ವರದಿಯಾಗಿದೆ. ವೇದ್ಯಕೀಯ-ಕಾನೂನು ವಿಧಿವಿಧಾನಗಳನ್ನು ನಡೆಸಲಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರಾಡಳಿತ ಪ್ರದೇಶದ ಮಾಹಿತಿ ಮತ್ತು PR ವಿಭಾಗ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಸರ್ಕಾರ, ಮೃತ ಪ್ರತಿಯೊಬ್ಬರಿಗೂ ಪರಿಹಾರವನ್ನು ಘೋಷಿಸಿದೆ ಮತ್ತು ಮೃತರ ಸಂಬಂಧಿಕರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದಾಗಿ ಘೋಷಿಸಿದೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಶಸ್ತ್ರಸಜ್ಜಿತ ಭಯೋತ್ಪಾದಕರು ಗುರುವಾರ ಮಧ್ಯಾಹ್ನ ಪೂಂಚ್ನ ಸುರನ್ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್ನಲ್ಲಿ ಸೇನೆಯ ಎರಡು ವಾಹನಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!