ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮುಂದಿನ ಒಂದು ವರ್ಷದ ತನಕ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಈ ಅವಽಯಲ್ಲಿ ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಮಾತ್ರ ಅವರಿಗೆ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಸೌಜನ್ಯ ಪರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಇದುವರೆಗೂ ವಿವಿಧ ರೀತಿಯ ಸುಮಾರು 36 ಪ್ರಕರಣಗಳು ದಾಖಲಾಗಿವೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು
