ಹಿಜಾಬ್ ವಿವಾದ: ಸಿಜೆ ನೇತೃತ್ವದಲ್ಲಿ ತ್ರಿಸದಸ್ಯ ಪೀಠ ರಚನೆ, ಇಂದು ಮಧ್ಯಾಹ್ನ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೀಠ ರಚನೆ ಮಾಡಿದ್ದು, ಇಂದು ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿದೆ.

ನಿನ್ನೆಯೂ ವಿಚಾರಣೆ ನಡೆದಿದ್ದು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕಾಗಿದೆಯೇ ಮತ್ತು ಹಿಜಾಬ್ ಧರಿಸುವುದು ಕಡ್ಡಾಯ ಆಚರಣೆಯೇ ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ ಆದ್ದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವ ಅವಶ್ಯ ಇದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟಿದ್ದರು.

ವಾದ ವಿವಾದ ಆಲಿಸಿದ ನಂತರ ಪ್ರಕರಣದ ತೀವ್ರತೆ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅರ್ಜಿಗಳ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿದ್ದಾರೆ. ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!