ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ದಂಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದರು.
ಬೆಳಗ್ಗೆ ಮಹಾದ್ವಾರದ ಬಳಿ ಆಗಮಿಸಿದ ಸಿಜಿಐ ದಂಪತಿಗೆ ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದೇವಾಲಯದಲ್ಲಿ ವಿಶೇಷ ವೇದ ಘೋಷ್ಠಿಗಳ ಮೂಲಕ ದೇವರಿಗೆ ಪೂಜೆ ಮಾಡಲಾಯಿತು.
ದೇವರ ದರ್ಶನದ ಬಳಿಕ ಮಾತನಾಡಿದ ನ್ಯಾಯಮೂರ್ತಿ ಎನ್. ವಿ. ರಮಣ ಅವರು, ತಿರುಮಲ ವೆಂಕಟೇಶ್ವರನ ಅನುಗ್ರಹದಿಂದ ನಾನು ಜೀವನದಲ್ಲಿ ಬೆಳೆದಿದ್ದೇನೆ. ದೇವರ ಆಶೀರ್ವಾದದಿಂದ ಜೀವನದಲ್ಲಿ ಹಲವಾರು ಅಚ್ಚರಿಗಳು ನಡೆದಿದೆ. ದೇಶದ ನ್ಯಾಯ ವ್ಯವಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಏರಿಸುತ್ತೇನೆ ಎಂದರು.