ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾಗಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಇಂದು ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.
ನಗದು ವಿವಾದದ ನಡುವೆ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಸಿಜೆಐ ಸಂಜೀವ್ ಖನ್ನಾ ಅವರು 3 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.
ಜೊತೆಗೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸದಂತೆ ಸಿಜೆಐ ಸಂಜೀವ್ ಖನ್ನಾ ಅವರು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸೂಚಿಸಿದ್ದಾರೆ.
ನ್ಯಾಯಮೂರ್ತಿ ಶೀಲ್ ನಾಗು (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ), ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ (ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ) ಮತ್ತು ನ್ಯಾಯಮೂರ್ತಿ ಅನು ಶಿವರಾಮನ್ (ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶ) ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ.