August 2, 2026
Sunday, August 2, 2026
spot_img

ಮುಂದಿನ ಹೋರಾಟಕ್ಕೆ CJP ಸಜ್ಜು: ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ತಿಂಗಳ ಕಾಲ ನಡೆಸಿದ ಪ್ರತಿಭಟನೆಯ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ ನಡೆಸಲಿದೆ.

ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರತಿಭಟನೆಯ ಅವಲೋಕನ ನಡೆಸುವುದರ ಜೊತೆಗೆ, ಮುಂದಿನ ಹಂತದ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಮುಕ್ತಾಯಗೊಂಡ ಬಳಿಕ ಕಾರ್ಯಕರ್ತರು ತಮ್ಮ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರೊಂದಿಗೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಈ ಸಲಹೆಗಳ ಆಧಾರದ ಮೇಲೆ ಮುಂದಿನ ಹೋರಾಟದ ರೂಪುರೇಷೆ ಅಂತಿಮಗೊಳಿಸಲಾಗುತ್ತದೆ.

ಇದನ್ನೂ ಓದಿ:

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ನಡೆದ ಸಿಜೆಪಿ ನೇತೃತ್ವದ ಪ್ರತಿಭಟನೆ ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ಬೆಂಬಲ ಪಡೆದಿತ್ತು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರಬೇಕೆಂದು ಸಂಘಟನೆ ಆಗ್ರಹಿಸಿತ್ತು.

ಈ ನಡುವೆ ಅಭಿಜಿತ್ ದೀಪ್ಕೆ ಅವರು ಭಾನುವಾರ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಜಿಲ್ಲೆಗಳಿಂದ ಬಂದ ಬೆಂಬಲಿಗರನ್ನು ಭೇಟಿ ಮಾಡಿದ್ದು, ಸ್ನೇಹಿತರ ದಿನಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 5ರ ಸಭೆಯ ಬಳಿಕ ಸಂಘಟನೆಯ ಮುಂದಿನ ಕಾರ್ಯಯೋಜನೆ ಮತ್ತು ಹೋರಾಟದ ದಿಕ್ಕು ಸ್ಪಷ್ಟವಾಗುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !