November 7, 2026
Saturday, November 7, 2026
spot_img

ಕೊಚ್ಚಿಯಲ್ಲಿ ಸಿಜೆಪಿ ಪ್ರತಿಭಟನೆ: ಪ್ರಧಾನಿ ಮೋದಿ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿರೋಧಿಸಿ ಕೊಚ್ಚಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕಾಗೆ ಶರಣಾಗತಿಯ ಆರೋಪ

ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾತಿಗೆ ಒಪ್ಪಿಕೊಂಡು, ಭಾರತದ ಹಿತಾಸಕ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ ಎಂದು ದೀಪ್ಕೆ ಆರೋಪಿಸಿದ್ದಾರೆ. ಟ್ರಂಪ್ ಒತ್ತಾಯದ ಮೇರೆಗೆ ರಷ್ಯಾದಿಂದ ತೈಲ ಖರೀದಿಸುವುದನ್ನು ಭಾರತ ನಿಲ್ಲಿಸಿದೆ ಮತ್ತು ಅಮೆರಿಕದ ಉತ್ಪನ್ನಗಳಿಗೆ ಶೂನ್ಯ ತೆರಿಗೆ ವಿಧಿಸಿ, ಭಾರತದ ಸರಕುಗಳ ಮೇಲೆ ಶೇ. 18 ರಷ್ಟು ತೆರಿಗೆಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಅವರು ದೂರಿದ್ದಾರೆ.
https://x.com/HCP_2026/status/2119071973481587191?a=ZPbkk8Xf9nj1sg5iDQg&s=20

ನಾಯಕರೊಂದಿಗೆ ಹೋಲಿಕೆ

ಮಹಾತ್ಮಾ ಗಾಂಧಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ಆತ್ಮ, ಬೆನ್ನೆಲುಬು ಮತ್ತು ಮನಸ್ಸಾಗಿದ್ದಾರೆ. ಪ್ರಧಾನಿ ಮೋದಿ ಅವರು 120 ವರ್ಷ ಅಧಿಕಾರದಲ್ಲಿದ್ದರೂ ಇವರಿಗಿಂತ ದೊಡ್ಡವರಾಗಲು ಸಾಧ್ಯವಿಲ್ಲ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ:

ಯುವ ಪ್ರತಿಭಟನಾಕಾರರ ಪರ ಬ್ಯಾಟಿಂಗ್

ದೇಶದಲ್ಲಿ ಚುನಾವಣಾ ಪಟ್ಟಿ ಪರಿಷ್ಕರಣೆ ವಿರುದ್ಧ ಯುವಕರು ಬೀದಿಗೆ ಇಳಿದು ಪ್ರತಿಭಟಿಸಿದರೆ, ಸರ್ಕಾರ ಅವರಿಗೆ ಪಾಕಿಸ್ತಾನ ಮತ್ತು ಅಮೆರಿಕಾದ ಬೆಂಬಲವಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ದೀಪ್ಕೆ ಹೇಳಿದ್ದಾರೆ. ದೇಶದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಧಾನಿಗೆ ಏಕೆ ಇಷ್ಟೊಂದು ಮುಖ್ಯವಾಗಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೊಚ್ಚಿಯ ಸ್ಥಳೀಯ ಸಂಘಟಕರು ಮತ್ತು ನಟ-ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಲು ತಾವಿಲ್ಲಿಗೆ ಬಂದಿರುವುದಾಗಿ ದೀಪ್ಕೆ ತಿಳಿಸಿದ್ದಾರೆ.

Must Read

Skip to toolbar