September 16, 2026
Wednesday, September 16, 2026
spot_img

ಸಿಜೆಪಿ ಪ್ರತಿಭಟನೆ | ಡಿಜಿಟಲ್ ಪೋಸ್ಟ್‌ಗಳ ಮೇಲೆ ಪೊಲೀಸರ ಕಣ್ಣು: ಯೂಟ್ಯೂಬರ್‌, ಇನ್‌ಫ್ಲುಯೆನ್ಸರ್‌ಗಳ ವಿರುದ್ಧ ತನಿಖೆ ತೀವ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಡಿಜಿಟಲ್ ವಿಷಯಗಳ ಕುರಿತು ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಪ್ರಚೋದನಕಾರಿ ಹಾಗೂ ದ್ವೇಷಭರಿತ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದಡಿ ಕೆಲವು ಯೂಟ್ಯೂಬರ್‌ಗಳು, ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಮತ್ತು ಖಾಸಗಿ ಡಿಜಿಟಲ್ ಸಂಸ್ಥೆಗಳ ಚಟುವಟಿಕೆಗಳನ್ನು ಪರಿಶೀಲಿಸಲಾಗುತ್ತಿದೆ.

180ಕ್ಕೂ ಹೆಚ್ಚು ಖಾತೆಗಳು ತನಿಖೆಯ ವ್ಯಾಪ್ತಿಗೆ

ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ನಡೆಸುತ್ತಿದ್ದು, ಸುಮಾರು 180ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳ ಪೋಸ್ಟ್‌, ವಿಡಿಯೊ ಹಾಗೂ ಲೈವ್ ಪ್ರಸಾರಗಳನ್ನು ಡಿಜಿಟಲ್ ಸಾಕ್ಷ್ಯಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ:

ಶಾಂತಿಯುತ ಪ್ರತಿಭಟನಾಕಾರರಿಗೆ ವಿನಾಯಿತಿ

ದೆಹಲಿ ಸರ್ಕಾರದ ಪ್ರಕಾರ, ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಾಮಾನ್ಯ ನಾಗರಿಕರು ಮತ್ತು ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಆದರೆ ಹಿಂಸಾಚಾರ, ಸಾರ್ವಜನಿಕ ಆಸ್ತಿ ಹಾನಿ ಅಥವಾ ಕ್ರಿಮಿನಲ್ ಹಿನ್ನೆಲೆ ಹೊಂದಿರುವವರ ವಿರುದ್ಧ ಕ್ರಮ ಮುಂದುವರಿಯಲಿದೆ.

ಪ್ರತಿಭಟನೆಗೆ ಸಂಬಂಧಿಸಿದಂತೆ ಈಗಾಗಲೇ 13 ಎಫ್‌ಐಆರ್ ದಾಖಲಾಗಿದ್ದು, ಸಾವಿರಾರು ಮಂದಿಯ ಪಾತ್ರವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !