ಹೊಸದಿಗಂತ ಡಿಜಿಟಲ್, ಮಂಗಳೂರು:
ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟೀಸ್ ಜಾರಿ ಮಾಡಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟನೆ ಕೇಳಿದೆ.
ಸೋಮವಾರ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಆದುದರಿಂದ ಈ ಪತ್ರ ತಲಪಿದ ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಠೀಕರಣ ನೀಡಬೇಕೆಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.