ಬಿಜೆಪಿ,ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಗಲಾಟೆ ನಡೆದಿದೆ.

ಇತ್ತೀಚೆಗಷ್ಟೇ ಕೊರಟೆಗೆರೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ನಡುವೆ ಗಲಾಟೆ, ಕಲ್ಲುತೂರಾಟ ನಡೆದಿತ್ತು. ಇದೀಗ ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಗಲಾಟೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಅವರ ಬೆಂಗಲಿಗರು ಹಾಗೂ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಬಲಿಗರು ಹೊಡೆದಾಡಿಕೊಂಡಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಅಭ್ಯರ್ಥಿ ಸೀರೆ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, 50 ಸೀರೆಗಳನ್ನು ಜಪ್ತಿ ಮಾಡಲಾಗಿತ್ತು, ಈ ವಿಷಯಕ್ಕಾಗಿ ಜಗಳ ಆಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!