ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ಸಮುದಾಯಗಳ ನಡುವೆ ಜಗಳ, ಸೆಕ್ಷನ್‌ 144 ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಳ್ಳಾರಿಯ ಕೊಳಗಲ್‌ ಗ್ರಾಮದಲ್ಲಿ ದೇವಸ್ಥಾನದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ.

ಇದರಲ್ಲಿ ಪಿಎಎಸ್‌ಐ ಸೇರಿ 30 ಮಂದಿ ಗಾಯಗೊಂಡಿದ್ದು, ಪೊಲೀಸರು 50 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದು, ಸೆಕ್ಷನ್‌ 144 ಜಾರಿ ಮಾಡಲಾಗಿದೆ.

ಕೆಲವು ತಿಂಗಳ ಹಿಂದೆ ಎರ್ರೆಪ್ಪಸ್ವಾಮಿ ಮೂರ್ತಿಯನ್ನು ಎಸ್‌ಸಿ ಸಮುದಾಯದವರು ಪ್ರತಿಷ್ಠಾಪಿಸಿದ್ದರು. ಇದೀಗ ಕುರುಬ ಸಮುದಾಯದವರಿಂದ ಮೂರ್ತಿ ಪ್ರತಿಷ್ಠಾಪಿಸಲು ಮುಂದಾದಾಗ ಈ ಗಲಾಟೆ ನಡೆದಿದೆ. ಮಠದ ಮೂಲ ಸ್ವಾಮಿ ಎರ್ರಿಸ್ವಾಮಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಈಗ ಎಸ್‌ಸಿ ಸಮುದಾಯಕ್ಕೆ ಸೇರಿದ ಎರ್ರೆಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದಾರೆ ಎನ್ನುವ ವಿಚಾರಕ್ಕೆ ಗಲಾಟೆಯಾಗಿದೆ. ಈ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಸೇರಿದಂತೆ 30 ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!