ಚಿಕ್ಕಮಗಳೂರು ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್​ ಕಚೇರಿಯಲ್ಲಿ ನಡೆಯುತ್ತಿದ್ದ ಬಂಡಾಯ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮೂಲ ಕಾಂಗ್ರೆಸ್ಸಿಗರ‌ ಸಭೆಯಲ್ಲಿ ಅರ್ಜಿ ಹಾಕದವರ ಹೆಸರು ಯಾಕೆ ಕೇಳಿ ಬರುತ್ತಿದೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಅರ್ಜಿ ಹಾಕಿರುವವರ ಹೆಸರು ಹೇಳಿ, ಅವರಿಗೆ ಟಿಕೆಟ್ ಕೊಡಬೇಕು ಎಂದು ಕಾರ್ಯಕರ್ತರು ಆರ್ಭಟಿಸಿದರು. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಹೆಚ್.ಡಿ.ತಮ್ಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧ ಕಿಡಿ ಕಾರಲಾಗುತ್ತಿದೆ. ತಮ್ಮಯ್ಯಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಸಭೆ ಸೇರಿದ್ದರು. ಸಭೆಯಲ್ಲಿ ‘ಕೈ’ ಮುಖಂಡರು, ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ ತಳ್ಳಾಟ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!