ಎರಡು ಗುಂಪುಗಳ ನಡುವೆ ಘರ್ಷಣೆ: ಕರ್ಫ್ಯೂ ಜಾರಿ, 31 ಜನರ ಬಂಧನ

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 9 ರಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಕ್ಕಳ ಆಟಿಕೆಗಾಗಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ನಂತರ ವಾದವು ಹಿಂಸಾತ್ಮಕ ತಿರುವು ಪಡೆದುಕೊಂಡು ಎರಡೂ ಗುಂಪುಗಳು ಪರಸ್ಪರ ಇಟ್ಟಿಗೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 31 ಜನರನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 10 ರಂದು ಬೆಳಿಗ್ಗೆ 11 ರಿಂದ ಜೂನ್ 12ರ ಬೆಳಿಗ್ಗೆ 11 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಅಗತ್ಯವಿದ್ದರೆ ಕರ್ಫ್ಯೂ ವಿಸ್ತರಿಸಬಹುದು.

ಕರ್ಫ್ಯೂ ಜಾರಿಯಾದಾಗಿನಿಂದ ಪರಿಸ್ಥಿತಿ ಶಾಂತಿಯುತವಾಗಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಎರಡೂ ಗುಂಪಿನ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ.

ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಲಗಾಂವ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಂ ರಾಜ್‌ಕುಮಾರ್ ಜನರಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!