ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಇಂದು ಕಾಂಗ್ರೆಸ್ ಪಕ್ಷದ 14 ಶಾಸಕರ ಅಮಾನತು ಮತ್ತು ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧವನ್ನು ವಿರೋಧಿಸಿ ಮೆರವಣಿಗೆ ನಡೆಸುತ್ತಿದ್ದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಜಟಾಪಟಿ ಉಂಟಾಗಿದೆ.
ಪ್ರತಿಭಟನಾ ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಗಳನ್ನು ಎಸೆದು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದ್ದಾರೆ. ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು ಕೂಡ ಪ್ರತಿಭಟನಾಕಾರರು ಪ್ರತಿಭಟನೆ ತೀವ್ರ ನಡೆಸುತ್ತಿದ್ದಂತೆ ಪೊಲೀಸರು ಗುಂಪನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಿದ್ದಾರೆ.