ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾಲ್ ಬಾಗ್ ನಲ್ಲಿ ಹೋಳಿ ಹಬ್ಬದ ಸಂಭ್ರಮ ಅತಿರೇಕಕ್ಕೆ ತಿರುಗಿ, ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೊಡೆದಾಟದ ವಿಡಿಯೋ ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಮರ್, ಉಮೇಶ್ ಮತ್ತು ರಮೇಶ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ ಒಬ್ಬಾತ ಬೆಂಗಳೂರು ನಿವಾಸಿಯಾಗಿದ್ದರೆ, ಉಳಿದ ಇಬ್ಬರು ನೇಪಾಳ ಮೂಲದವರು ಎಂದು ತಿಳಿದು ಬಂದಿದೆ.