ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಹೊರವಲಯದಲ್ಲಿ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಮೆರವಣಿಗೆಯ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಸಂಭವಿಸಿದೆ.
ಭಾನುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೂರು ಕಾರುಗಳು ಮತ್ತು ಹಲವಾರು ದ್ವಿಚಕ್ರವಾಹನಗಳಲ್ಲಿ ಜನರ ಗುಂಪು ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ ಭಾಗಿಯಾಗಿರುವ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶ್ರೀರಾಮನನ್ನು ಸ್ತುತಿಸಿ ಘೋಷಣೆಗಳನ್ನು ಕೂಗಿದರು. ಕೆಲವು ಪ್ರತಿಭಟನಾಕಾರರು ಪಟಾಕಿ ಸಿಡಿಸಿದ್ದಾರೆಂದು ಎಂದು ಆರೋಪಿಸಲಾಗಿದೆ.
ಈ ವೇಳೆ ದೊಣ್ಣೆ ಹಿಡಿದುಕೊಂಡು ಹೊರಬಂದ ಸ್ಥಳೀಯರೊಂದಿಗೆ ವಾಗ್ವಾದಕ್ಕೆ ಕಾರಣವಾಯಿತು. ಇದು ಸಂಘರ್ಷವಾಗಿ ಮುಂದುವರೆಯಿತು. ವಾಹನಗಳಲ್ಲಿದ್ದವರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಾರೀ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.