ದೆಹಲಿಯಲ್ಲಿ ಹನುಮ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲುತೂರಾಟ; 15 ಜನರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಹಾಂಗೀರ್‌ಪುರಿ ಪ್ರದೇಶದಲ್ಲಿ ಆಯೋಜಿಸಿದ್ದ ಹನುಮ ಜಯಂತಿ ಶೋಭಾಯಾತ್ರೆ ಮೇಲೆ ಕಲ್ಲುತೂರಾಟ ನಡೆದಿದ್ದು, ಈ ವೇಳೆ ಎರಡೂ ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಈ ಕುರಿತು ಕ್ರಮ ಕೈಗೊಂಡಿರುವ ಪೊಲೀಸರು ಕಲ್ಲುತೂರಾಟ ನಡೆಸಿದ 15 ಜನರನ್ನು ಬಂಧಿಸಿದ್ದಾರೆ.
ಶನಿವಾರ ಹಿಂದೂ ಸಮುದಾಯದವರು ಶನಿವಾರ ಹನುಮ ಜಯಂತಿ ಶೋಭಾಯಾತ್ರೆ ನಡೆಸುವಾಗ ಸಂಜೆ ೬ ಗಂಟೆ ಹೊತ್ತಿನಲ್ಲಿ ದುಷ್ಕರ್ಮಿಗಳು ಏಕಾಏಕಿ ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಸಾಕಷ್ಟು ವಾಹನಗಳು ಧ್ವಂಸಗೊಂಡಿವೆ. ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಆರು ಪೊಲೀಸ್‌ ಸಿಬ್ಬಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಘರ್ಷಣೆ ವೇಳೆ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಒಬ್ಬರಿಗೆ ದುಷ್ಕರ್ಮಿಯೊಬ್ಬ ಹಾರಿಸಿದ ಗುಂಡು ತಗುಲಿದೆ.
ಹಿಂಸಾಚಾರ ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದ್ದು, 15 ಜನರನ್ನು ಬಂಧಿಸಲಾಗಿದೆ. ಈಗ ಪರಿಸ್ಥಿತಿ ಶಾಂತವಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪರಿಸ್ಥತಿ ನಮ್ಮ ನಿಯಂತ್ರಣದಲ್ಲಿದೆ ಎಂದು ನವದೆಹಲಿಯ ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಕಮಿಷನರ್ ದೇವೇಂದ್ರ ಪಾಠಕ್ ಹೇಳಿದ್ದಾರೆ. ಘಟನೆ ಸಂಬಂಧ ವರದಿ ನೀಡುವಂತೆ ಗೃಹಸಚಿವ ಅಮಿತ್‌ ಶಾ ದೆಹಲಿ ಪೊಲೀಸರಿಗೆ ಸೂಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!