ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಅನಧಿಕೃತ ದರ್ಗಾವನ್ನು ಕೆಡವುದನ್ನು ವಿರೋಧಿಸುತ್ತಿದ್ದವರ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ ಇಪ್ಪತ್ತೊಂದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮೂರು ಪೊಲೀಸ್ ವಾಹನಗಳಿಗೆ ಹಾನಿಯಾಗಿವೆ.
ನಿನ್ನೆ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಉದ್ರಿಕ್ತ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಪರಿಸ್ಥಿತಿ ಪ್ರಸ್ತುತ ಶಾಂತಸ್ಥಿತಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.