ಮತದಾನ ಮುಗಿದ ಬೆನ್ನಿಗೆ ಯಾದಗಿರಿಯಲ್ಲಿ ಘರ್ಷಣೆ: ಸೆಕ್ಷನ್‌ 144 ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಾದಗಿರಿ ಜಿಲ್ಲೆಯಲ್ಲಿ ಮತದಾನ ಪೂರ್ಣಗೊಳ್ಳುವ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೆಂಭಾವಿ ಮತ್ತು ಸುರಪುರ ಪಟ್ಟಣಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ 2 ದಿನಗಳ ಕಾಲ ಸೆಕ್ಷನ್‌ 144 ಜಾರಿ ಮಾಡಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆದಿತ್ತು. ಇನ್ನು ಕೆಲವೇ ನಿಮಿಷಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವ ವೇಳೆ ಜಿಲ್ಲೆಯ ಕೆಂಭಾವಿ ಮತ್ತು ಸುರಪುರ ಪಟ್ಟಣಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ 2 ದಿನಗಳ ಕಾಲ ಸೆಕ್ಷನ್‌ 144 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ಮಾಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಎಸ್ಪಿ ವೇದಮೂರ್ತಿ ಅವರು ಇಂದು ಮತ್ತು ನಾಳೆ ಕೆಂಭಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಈ ಎರಡು ದಿನಗಳ ಕಾಲ ಪೊಲೀಸರು ರಾತ್ರಿ ಪಟ್ರೋಲಿಂಗ್ ಹಾಗೂ ಗಸ್ತು ಪಡೆ ಠಿಕಾಣಿ ಹೂಡಲಿದೆ. ಇನ್ನು ನಿಷೇಧಾಜ್ಞೆ ಜಾರಿ ಪಟ್ಟಣಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಎಲ್ಲರೂ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!