ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಪರೀಕ್ಷಾ ಒತ್ತಡ ಹಿನ್ನೆಲೆಯಲ್ಲಿ ತನ್ನ ಫ್ಲ್ಯಾಟ್‌ನ 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಸೋಮವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, 17 ವರ್ಷದ ತರುಣ ರಿಟ್ರೀಟ್ ಸೊಸೈಟಿ, ಸೆಕ್ಟರ್ 41ರಲ್ಲಿನ ಸೌತ್ ಸಿಟಿಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.
ವಿದ್ಯಾರ್ಥಿಯು ಪರೀಕ್ಷಾ ಆತಂಕಕ್ಕೆ ಒಳಗಾಗಿದ್ದ ಎಂದು ತಿಳಿಸಿರುವ ಪೊಲೀಸರು ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.